ಒಳ ಮೀಸಲಾತಿ ಜಾರಿಯಾದ ಬೆನ್ನಲ್ಲೇ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 72,186 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಶ್ರೀ
@DKShivakumar ಅವರ ನೇತೃತ್ವದ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 32,177 ಹುದ್ದೆಗಳೂ ಭರ್ತಿಯಾಗಲಿದೆ.
ಈ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕ ಹಾಗೂ ತ್ವರಿತವಾಗಿ ನಡೆಸಲು ಕಾಲಮಿತಿಯನ್ನು ನಿಗದಿ ಪಡಿಸಲಾಗಿದೆ. ಇದರಂತೆ ಮುಂದಿನ 4 ತಿಂಗಳ ಒಳಗಾಗಿ ನೇಮಕಾತಿ ಪರೀಕ್ಷೆಗಳು ನಡೆಯಲಿವೆ. ಒಟ್ಟಾರೆ 6 ತಿಂಗಳ ಒಳಗಾಗಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿವೆ.
ನಾಡಿನ ಉದ್ಯೋಗಾಕಾಂಕ್ಷಿಗಳು ಅಗತ್ಯ ತಯಾರಿ ನಡೆಸಿ, ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ. ನಿಮ್ಮಿಷ್ಟದ ಉದ್ಯೋಗವನ್ನು ನಿಮ್ಮದಾಗಿಸಿಕೊಳ್ಳಿ.